ಮಂಗಳವಾರ, ಮೇ 12, 2026

ಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನ

ಬಳ್ಳಾರಿ,ಮೇ 12(ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ‘ಭೂ ಒಡೆತನ ಯೋಜನೆ'ಯಡಿ ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ಭೂ ಮಾಲೀಕರೊಬ್ಬರು ತಮ್ಮ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಜಮೀನಿಗೆ ಸಂಬAಧಿಸಿದAತೆ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ನಿಗಮವು ಕಾಲಾವಕಾಶ ನೀಡಿದೆ. *ಜಮೀನಿನ ವಿವರ:* ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಹೋಬಳಿಯ ಕಮ್ಮರಚೇಡು ಗ್ರಾಮದ ಸರ್ವೆ ನಂಬರ್ 4/2, ವಿಸ್ತೀರ್ಣ 7 ಎಕರೆ 58 ಗುಂಟೆ. ಮಾಲೀಕರ ವಿಳಾಸ: ಕೆ.ಹೆಚ್. ಮಹೇಶ್ (ತಂದೆ: ಹನುಮಂತ ರೆಡ್ಡಿ), ವಾರ್ಡ್ ನಂ. 29, ಬಂಡಿಹಟ್ಟಿ, ತಾಯಮ್ಮ ದೇವಸ್ಥಾನ ಹತ್ತಿರ, ಕೌಲ್ ಬಜಾರ್, ಬಳ್ಳಾರಿ ನಗರ. ಈ ಜಮೀನಿನ ಮಾರಾಟ ಪ್ರಕ್ರಿಯೆಗೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕಾನೂನಾತ್ಮಕ ಅಥವಾ ಇತರ ಆಕ್ಷೇಪಣೆಗಳಿದ್ದಲ್ಲಿ ಮೇ 30 ರೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ನಂ. 37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆAಟ್, ಬಳ್ಳಾರಿ ಇಲ್ಲಿಗೆ ಕಚೇರಿಯ ಅವಧಿಯಲ್ಲಿ ನೇರವಾಗಿ ಭೇಟಿ ನೀಡಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-245551 ಗೆ ಸಂಪರ್ಕಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ