ಶನಿವಾರ, ಜೂನ್ 6, 2026

ಜೂನ್ 10 ರಂದು ಉದ್ಯೋಗ/ಶಿಶುಕ್ಷÄ ಮೇಳ

ಬಳ್ಳಾರಿ,ಜೂ.06(ಕರ್ನಾಟಕ ವಾರ್ತೆ): ಇಲ್ಲಿನ ರೇಡಿಯೋ ಪಾರ್ಕ್ನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ವತಿಯಿಂದ ಜೂನ್ 10 ರಂದು ಬೆಳಿಗ್ಗೆ 10 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಉದ್ಯೋಗ/ಶಿಶುಕ್ಷÄ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಬಳ್ಳಾರಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳು ಹಾಗೂ ಬೆಂಗಳೂರಿನ ಪ್ರಮುಖ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಐಟಿಐ ತೇರ್ಗಡೆಯಾದ ಹಾಗೂ ಪ್ರಸಕ್ತ ಸಾಲಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9741183501, 7676161097 ಗೆ ಸಂಪರ್ಕಿಸಬಹುದಾಗಿದೆ. ಬಳ್ಳಾರಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಐಟಿಐ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ