ಗುರುವಾರ, ಜೂನ್ 11, 2026

ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ, ಜಾಥ

ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ); ‘ಮಕ್ಕಳ ಕಾರ್ಮಿಕತೆಗೆ ರೆಡ್ ಕಾರ್ಡ್ ತೋರಿಸಿ, ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆಯ ಉದ್ಯೋಗ’ ಎಂಬ ಘೋಷ್ಯವಾಕ್ಯದೊಂದಿಗೆ ಜೂ.12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ವಕೀಲರ ಸಂಘ, ವಿವಿಧ ಇಲಾಖೆಗಳು ಮತ್ತು ಇತರೆ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. *ಜಾಥಾ:* ವೇದಿಕೆ ಕಾರ್ಯಕ್ರಮದ ಮುನ್ನ ಅಂದು ಬೆಳಿಗ್ಗೆ 09 ಗಂಟೆಗೆ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಾಗೃತಿ ಜಾಥ ನಡೆಯಲಿದೆ. ಜಾಥಾವು ಅಲ್ಲಿಂದ ಪ್ರಾರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ತೇರು ಬೀದಿ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು ಅವರು ಜಾಥಾಗೆ ಚಾಲನೆ ನೀಡುವರು. ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಅವರು ಉದ್ಘಾಟಿಸುವರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತರ್, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ÷ಜಿ. ಖೈನೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಜೆ.ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಎಂ., ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧೆ ನಂದಿನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮ ಬ್ರಹ್ಮಂ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಸ್.ಅನ್ಸರ್ ಬಾಷಾ ಸೇರಿದಂತೆ ಇತರರು ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯರು ಹಾಗೂ ವಕೀಲರಾದ ಶಿವಲೀಲ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ರಮೇಶ್(ಬಳ್ಳಾರಿ ವೃತ್ತ-1), ಪರಶುರಾಮ್(ಬಳ್ಳಾರಿ ವೃತ್ತ-2) ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ