ಶುಕ್ರವಾರ, ಜೂನ್ 12, 2026

ಜೂ.14 ರಂದು ಹಚ್ಚೊಳ್ಳಿ ಉಪವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 33/11 ಕೆವಿ ಹಚ್ಚೊಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ 11 ಕೆವಿ ಜಿಒಎಸ್ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.14 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಹಚ್ಚೊಳ್ಳಿ ಉಪವಿದ್ಯುತ್ ಕೇಂದ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಹಾಗೂ ಗ್ರಾಹಕರು ಜೆಸ್ಕಾಂ ಸಿಬ್ಬಂದಿಯೊAದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ