ಶುಕ್ರವಾರ, ಜೂನ್ 12, 2026

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ): ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಜೂ.18 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಂದು-ಕೊರತೆ ಆಲಿಕೆ ಸಭೆ ಆಯೋಜಿಸಲಾಗಿದೆ. ಸಮಸ್ಯೆಗಳಿರುವ ಪರಿಶಿಷ್ಟ ಜಾತಿಯ ವಿವಿಧ ಸಂಘ- ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಅಂದು ನಡೆಯುವ ಕುಂದು-ಕೊರತೆ ಆಲಿಕೆ ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ