ಬುಧವಾರ, ಜೂನ್ 17, 2026

ಜೂ.18 ರಂದು ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಚರ್ಚಿಸಲು ಜೂ.18 ರಂದು ಸಂಜೆ 4 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿ ಮಹನೀಯರ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಲಹೆ ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ