ಬುಧವಾರ, ಜೂನ್ 17, 2026

ಬಳ್ಳಾರಿ: ಜೂ.18ರ ಪರಿಶಿಷ್ಟ ಜಾತಿಯವರ ಕುಂದುಕೊರತೆಗಳ ಸಭೆ ಮುಂದೂಡಿಕೆ

ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಜೂ.18 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿಯವರ ಕುಂದುಕೊರತೆಗಳ ಸಭೆಯನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ತುರ್ತು ಕಾರಣಗಳಿಂದಾಗಿ ಈ ಸಭೆಯನ್ನು ಮುಂದೂಡಲಾಗಿದ್ದು, ಸಭೆ ನಡೆಯುವ ಮುಂದಿನ ದಿನಾಂಕ ಮತ್ತು ಸಮಯವನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ