ಗುರುವಾರ, ಜೂನ್ 18, 2026
ಜೂ.19 ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ‘ನಡಿಗೆ ಜಾಥಾ' ಆಯೋಜನೆ
ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):
ಅಂತಾರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಮತ್ತು ಅದರ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳು ಜಂಟಿಯಾಗಿ ಜೂ.19 ರಂದು ಬೆಳಿಗ್ಗೆ 08.15 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೃಹತ್ ‘ನಡಿಗೆ ಜಾಥಾ' ಹಮ್ಮಿಕೊಳ್ಳಲಾಗಿದೆ.
*ಸಂಚರಿಸುವ ಮಾರ್ಗ:*
ನೂತನ ಜಿಲ್ಲಾಡಳಿತನ ಭವನದ ಆರಂಭವಾಗುವ ಜಾಥಾವು ಸಂಗಮ್ ವೃತ್ತ ಮತ್ತು ಗಡಿಗಿ ಚೆನ್ನಪ್ಪ ವೃತ್ತದ ಮುಖಾಂತರ ಹಳೆಯ ಜಿಲ್ಲಾ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಳ್ಳಲಿದೆ.
ಈ ನಡಿಗೆ ಜಾಥಾದಲ್ಲಿ ಯೋಗ ಮತ್ತು ಯೋಗ ದಿನಾಚರಣೆಯ ಮಹತ್ವವನ್ನು ಸಾರುವ ವಿವಿಧ ಭಿತ್ತಿ ಪತ್ರಗಳನ್ನು ಹಿಡಿದು ನಗರದ ರಸ್ತೆಗಳಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೀಂದರ .ಟಿ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ