ಮಂಗಳವಾರ, ಜೂನ್ 16, 2026
ಬಳ್ಳಾರಿ: ಜೂ.19 ರಂದು ನೇರ ಸಂದರ್ಶನ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಂಪನಿ ಇವರ ಜಂಟಿ ಆಶ್ರಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜೂನ್ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
*ಸಂದರ್ಶನ ನಡೆಯುವ ಸ್ಥಳ:*
ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್ ಕಚೇರಿ, 2ನೇ ಮಹಡಿ, ಅಯ್ಯಪ್ಪನ್ ಡು-ಟವರ್, ಎಂಐಜಿ -3 ಕೆಹೆಚ್‌ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್‌ಸಿ ಕಚೇರಿ ಎದುರು, ಬಳ್ಳಾರಿ - 583103.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದವರು ಭಾಗವಹಿಸಬಹುದು. ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಅವಕಾಶವಿದೆ. ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ (ಉಚಿತ ಪ್ರವೇಶ).
ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಸ್ವ-ವಿವರಗಳ ಮಾಹಿತಿ ಪ್ರತಿ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಹಾಜರಾಗಬೇಕು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ