ಬುಧವಾರ, ಜೂನ್ 17, 2026
ಬಳ್ಳಾರಿ: ಜೂ.19 ರಂದು ಪಿಎಂ-ವಿಬಿಆರ್‌ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಮತ್ತು ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನ್ ಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ' ಅಡಿ ಬೃಹತ್ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾರ್ಗದರ್ಶನದಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿಯು ಜೂನ್ 19 ರಂದು ಸಂಜೆ 04 ಗಂಟೆಗೆ ತೋರಣಗಲ್ಲು ವಿದ್ಯಾನಗರದ ಜೆಎಸ್‌ಡಬ್ಲ್ಯೂ ಟೌನ್‌ಶಿಪ್‌ನಲ್ಲಿರುವ ‘ಜೆಮ್ಯಾಕ್ಸ್' ಸಭಾಂಗಣದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
*ಪ್ರಧಾನಮಂತ್ರಿ ಮೋದಿಯವರಿಂದ ರೂ.2,400 ಕೋಟಿ ಪ್ರೋತ್ಸಾಹಧನ ವಿತರಣೆ:*
ಇದೇ ಜೂನ್ 19ರಂದು ಸಂಜೆ 05 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯೋಜನೆಯ ಫಲಾನುಭವಿಗಳಿಗೆ ಸುಮಾರು 2,400 ಕೋಟಿ ರೂಪಾಯಿಗಳ ಪ್ರೋತ್ಸಾಹಧನವನ್ನು ನೇರವಾಗಿ ವಿತರಿಸಲಿದ್ದಾರೆ.
ಇದರ ಅಂಗವಾಗಿ ತೋರಣಗಲ್ಲಿನಲ್ಲಿ ಈ ವಿಶೇಷ ಸಂಪರ್ಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಉದ್ಯೋಗದಾತರು, ಉದ್ಯೋಗಿಗಳು, ಪಿಎಂ-ವಿಬಿಆರ್‌ವೈ ಫಲಾನುಭವಿಗಳು, ಉದ್ಯಮ ರಂಗದ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬಳ್ಳಾರಿ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯ ಆಯುಕ್ತ ಕೆ.ವಿ. ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ