ಬುಧವಾರ, ಜೂನ್ 10, 2026
ಸಿರುಗುಪ್ಪ: ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ):
ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಅಡಿ ನಗರದ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತ ಕುಟುಂಬಗಳನ್ನು ಗುರುತಿಸಲು ರ‍್ಯಾಪಿಡ್ ಡಿಮ್ಯಾಂಡ್ ಸರ್ವೆ' ಕೈಗೊಳ್ಳಲು ತಿಳಿಸಲಾಗಿದ್ದು, ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರು ವಸತಿ ಸೌಲಭ್ಯಕ್ಕಾಗಿ ನಿಗದಿತ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಅಧಿಕೃತ ವೆಬ್‌ಸೈಟ್ https://pmay-urban.gov.in ಪೋರ್ಟಲ್ ಮೂಲಕ ಜೂನ್ 30 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಅವಧಿ ಮುಗಿದ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ವಸತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಸಾರ್ವಜನಿಕರು ನಗರದಲ್ಲಿರುವ ಕಾಮನ್ ಸರ್ವಿಸ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮೂಲಕ ಅಥವಾ ತಾವೇ ನೇರವಾಗಿ ಮೇಲ್ಕಂಡ ಅಧಿಕೃತ ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
*ಅಗತ್ಯ ದಾಖಲೆಗಳು:*
ಆಧಾರ್ ಕಾರ್ಡ್ (ಮನೆಯ ಯಜಮಾನ/ಯಜಮಾನಿ ಹಾಗೂ ತಂದೆ/ತಾಯಿ ಮತ್ತು ಪಡಿತರ ಚೀಟಿಯಲ್ಲಿರುವಂತೆ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ಗಳು), ನಿವೇಶನಕ್ಕೆ ಸಂಬAಧಿಸಿದ ದಾಖಲೆಗಳು (ವಸತಿ ರಹಿತರಾಗಿದ್ದಲ್ಲಿ ನಿವೇಶನಕ್ಕೆ ಸಂಬAಧಿಸಿದ ಹಕ್ಕುಪತ್ರ/ಕ್ರಯಪತ್ರ/ದಾನ ಪತ್ರ/ಉಡುಗೊರೆ ಪತ್ರ/ಖಾತಾ ನಕಲು, ಫಾರಂ-3).
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (ಅನುಬಂಧ-2ಎ/2ಬಿ/2ಸಿ) ಯಲ್ಲಿ ಸ್ವಯಂ ದೃಢೀಕರಣ ಪತ್ರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ).
ಯೋಜನೆಯ ಮಾರ್ಗಸೂಚಿಗಳನ್ವಯ ಕ್ರಮ ವಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಕಚೇರಿ ವೇಳೆಯಲ್ಲಿ ಸಿರುಗುಪ್ಪ ನಗರಸಭೆಯ ಕಚೇರಿ ಶಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ