ಶನಿವಾರ, ಜೂನ್ 20, 2026
ಜೂ.20 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಜೂ.20 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ