ಶನಿವಾರ, ಜೂನ್ 20, 2026
ಬಳ್ಳಾರಿ: ಜೂ.21 ರಂದು ನೀಟ್ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆ
ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ):
ರಾಷ್ಟಿçÃಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು ಜೂ.21 ರಂದು ಮಧ್ಯಾಹ್ನ 02 ರಿಂದ ಸಂಜೆ 05.30 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಬಳ್ಳಾರಿ ನಗರದ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ.
ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ