ಶುಕ್ರವಾರ, ಜೂನ್ 19, 2026
ಜೂನ್ 21 ರಂದು ನ್ಯಾಯಾಧೀಶರಿಗೆ ‘ಮಧ್ಯಸ್ಥಿಕೆ’ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಧೀಶರು ಹಾಗೂ ರೆಫರಲ್ ಜಡ್ಜ್ಗಳಿಗೆ ಮಧ್ಯಸ್ಥಿಕೆ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಹಾಗೂ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
*ವರ್ಚುವಲ್ ಉದ್ಘಾಟನೆ*
ಈ ತರಬೇತಿ ಕಾರ್ಯಾಗಾರವು ಜೂ.21 ರಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ 1 ನೇ ಮಹಡಿಯ ಸಭಾಂಗಣದಲ್ಲಿ ಜರುಗಲಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಆರ್.ನಟರಾಜ್ ಅವರು ವರ್ಚುವಲ್ ಮುಖಾಂತರ ಈ ಕಾರ್ಯಾಗಾರ ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ಭಾಗವಹಿಸಲಿದ್ದಾರೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಚಂದ್ರಶೇಖರ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ವಿಜಯನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಎಂ. ರಾಜಶೇಖರ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು ಅವರು ಉಪಸ್ಥಿತರಿರುವರು.
ಬೆಂಗಳೂರಿನ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ತರಬೇತುದಾರರಾದ ಬೃಂದಾ ನಂದಕುಮಾರ್ ಹಾಗೂ ಜೋ ಜೋಸೆಫ್ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ನ್ಯಾಯಾಧೀಶರಿಗೆ ತರಬೇತಿ ನೀಡಲಿದ್ದಾರೆ.
ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳು ಸೇರಿದಂತೆ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ