ಗುರುವಾರ, ಜೂನ್ 18, 2026

ಜೂ.29 ರಂದು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಭೆ; ಸಾರ್ವಜನಿಕರಿಂದ ದೂರು ಸಲ್ಲಿಕೆಗೆ ಅವಕಾಶ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಮಿತಿ ಸಭೆಯನ್ನು ಜೂನ್ 29 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದ “ಸಿ” ಬ್ಲಾಕ್ ನ ಮೊದಲ ಮಹಡಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ತಿಳಿಸಿದ್ದಾರೆ. ಸರ್ಕಾರವು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರನ್ನು ಈ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪೊಲೀಸ್ ಇಲಾಖೆಯ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರಲ್ಲಿ ಏನಾದರೂ ದೂರುಗಳಿದ್ದಲ್ಲಿ, ಸಭೆಗೆ ಖುದ್ದಾಗಿ ಆಗಮಿಸಿ, ಪ್ರಾಧಿಕಾರದ ಸಮಿತಿಯ ಮುಂದೆ ತಮ್ಮ ದೂರುಗಳನ್ನು ಅಧಿಕೃತವಾಗಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ