ಬುಧವಾರ, ಜೂನ್ 17, 2026
ನಿಯತಕಾಲಿಕೆಗಳು ಜೂನ್ 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ ರೂ.10 ಸಾವಿರ ದಂಡ | ಎಲ್ಲಾ ಪ್ರಕಾಶಕರು ದಂಡದಿAದ ಪಾರಾಗಲು ತಕ್ಷಣವೇ ಪ್ರೆಸ್ ಸೇವಾ ಪೋರ್ಟಲ್ ಮೂಲಕ ತಪ್ಪದೆ ವರದಿ ಸಲ್ಲಿಸಿ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಭಾರತ ಸರ್ಕಾರದ ಪ್ರೆಸ್ ರಿಜಿಸ್ಟಾçರ್ ಜನರಲ್ ಕಚೇರಿಯು (ಮಾಹಿತಿ ಮತ್ತು ಪ್ರಸಾರ ಸಚಿವಾಲಯ) ದೇಶದ ಎಲ್ಲಾ ನೋಂದಾಯಿತ ನಿಯತಕಾಲಿಕೆಗಳ ಪ್ರಕಾಶಕರು 2024-25ರ ಆರ್ಥಿಕ ವರ್ಷದ ಆಡಿಟ್ ಮಾಡಲಾದ ವಾರ್ಷಿಕ ಹೇಳಿಕೆಯನ್ನು 2026 ನೇ ಜೂನ್ 30 ರ ಒಳಗಾಗಿ ಸಲ್ಲಿಸುವಂತೆ, ತಪ್ಪಿದಲ್ಲಿ ಭಾರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
ಸರ್ಕಾರ ಹೊರಡಿಸಿರುವ ‘ಸಲಹಾ ಸೂಚನೆ ಸಂಖ್ಯೆ 11 ರ ಪ್ರಕಾರ, ‘ಪ್ರೆಸ್ ಮತ್ತು ನಿಯತಕಾಲಿಕೆಗಳ ನೋಂದಣಿ ಕಾಯ್ದೆ, 2023' ರ ಸೆಕ್ಷನ್ 7 ರ ಅಡಿಯಲ್ಲಿ ಪ್ರತಿ ನೋಂದಾಯಿತ ನಿಯತಕಾಲಿಕೆಯು ನಿಗದಿತ ಅವಧಿಯೊಳಗೆ ತನ್ನ ವಾರ್ಷಿಕ ಹೇಳಿಕೆಯನ್ನು ‘ಪ್ರೆಸ್ ಸೇವಾ ಪೋರ್ಟಲ್' ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ. ಕಾಯ್ದೆಯ ಸೆಕ್ಷನ್ 14 ರ ಪ್ರಕಾರ, ಹಣಕಾಸು ವರ್ಷ ಮುಗಿದ ಒಂದು ವರ್ಷದೊಳಗೆ ವರದಿ ಸಲ್ಲಿಸಲು ವಿಫಲರಾಗುವ ಪ್ರಕಾಶಕರು ದಂಡನೆಗೆ ಗುರಿಯಾಗಲಿದ್ದಾರೆ.
*ದಂಡದ ವಿವರಗಳು*:
*ಮೊದಲ ಬಾರಿಯ ಸುಸ್ತಿದಾರರಿಗೆ*: ನಿಗದಿತ ದಿನಾಂಕದೊಳಗೆ ವರದಿ ಸಲ್ಲಿಸದಿದ್ದರೆ ಕನಿಷ್ಠ ರೂ. 10,000/- (ಹತ್ತು ಸಾವಿರ ರೂಪಾಯಿ) ದಂಡ ವಿಧಿಸಲಾಗುತ್ತದೆ.
*ಮುಂದಿನ ಸರಣಿ ವೈಫಲ್ಯಗಳಿಗೆ*: ಪ್ರತಿ ನಂತರದ ವರ್ಷದ ಸುಸ್ತಿಗೆ ದಂಡದ ಮೊತ್ತವು ದುಪ್ಪಟ್ಟಾಗುತ್ತಾ ಹೋಗುತ್ತದೆ (ಉದಾಹರಣೆಗೆ ಎರಡನೇ ಬಾರಿಗೆ ರೂ. 20,000/-).
*ಗರಿಷ್ಠ ದಂಡದ ಮಿತಿ*: ಈ ದಂಡದ ಮೊತ್ತವು ಗರಿಷ್ಠ ರೂ. 2,00,000/- (ಎರಡು ಲಕ್ಷ ರೂಪಾಯಿ) ವರೆಗೆ ತಲುಪಬಹುದು.
*ಕಾಲಾವಕಾಶ ವಿಸ್ತರಣೆ ಇಲ್ಲ*:
ಸರ್ಕಾರವು ಜೂನ್ 30, 2026 ರ ಗಡುವಿನ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಸಿದ್ದು, ನಿಯಮ ಉಲ್ಲಂಘಿಸುವ ಪ್ರಕಾಶಕರಿಂದ ಕಡ್ಡಾಯವಾಗಿ ದಂಡ ವಸೂಲಿ ಮಾಡಲಾಗುವುದು ಎಂದು ಪ್ರೆಸ್ ಡೆಪ್ಯುಟಿ ಪ್ರೆಸ್ ರಿಜಿಸ್ಟಾçರ್ ಜನರಲ್ ರತ್ನಾಕರ್ ಪಾಮುಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ