ಮಂಗಳವಾರ, ಜೂನ್ 16, 2026

ಜೂ.30 ರಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಬಳ್ಳಾರಿಗೆ

ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು, ಜೂನ್ 30 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂ.30 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಹಿಂದುಳಿದ ಹಾಗೂ ಕೊಳಚೆ ಪ್ರದೇಶಗಳಲ್ಲಿರುವ ಅಂಗನವಾಡಿ ಮತ್ತು ಉರ್ದು ಶಾಲೆಗಳಿಗೆ ಅಧ್ಯಕ್ಷರು ಭೇಟಿ ನೀಡಿ ಪರಿಶೀಲಿಸುವರು. ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆಗಳ ವಿಚಾರಣಾ ಸಭೆ ನಡೆಸುವರು. ನಂತರ ಮಧ್ಯಾಹ್ನ 03 ಗಂಟೆಗೆ ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ