ಶನಿವಾರ, ಜೂನ್ 6, 2026

ಸಾರಿಗೆ ಇಲಾಖೆ: ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ

ಬಳ್ಳಾರಿ,ಜು.06(ಕರ್ನಾಟಕ ವಾರ್ತೆ): ಸಾರಿಗೆ ಇಲಾಖೆಯಲ್ಲಿ 1991ರ ಏಪ್ರಿಲ್ 01 ರಿಂದ 2022ರ ಮಾರ್ಚ್ 31 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ದಂಡ ಪಾವತಿಯ ಮೇಲೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ಪಾವತಿದಾರರಿಗೆ ಜೂನ್ 06 ರಿಂದ ಜುಲೈ 10 ರ ವರೆಗೆ ಕಾಲಾವಕಾಶ ನೀಡಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲೀಕರು ರಿಯಾಯಿತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ