ಸೋಮವಾರ, ಜೂನ್ 1, 2026
ಯುವತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ):
ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ 6 ನೇ ವಾರ್ಡ್ ಇಂದಿರಾನಗರ ನಿವಾಸಿಯಾದ ಜಡೆಮ್ಮ ಎನ್ನುವ 21 ವರ್ಷದ ಯುವತಿ ಏ.12 ರಂದು ಕಂಪ್ಯೂಟರ್ ಆನ್ ಲೈನ್ ನಲ್ಲಿ ಅಪ್ಲಿಕೇಷನ್ ಹಾಕಿ ಬರುವುದಾಗಿ ಹೇಳಿ ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಯುವತಿಯ ಚಹರೆ: ಎತ್ತರ 4.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ.
ಕಾಣೆಯಾದ ಯುವತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08392-263433, ಮೊ.9480803051, 9480803039, ಬಳ್ಳಾರಿ ಎಸ್.ಪಿ ಕಚೇರಿ ದೂ.08392-258400 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ