ಸೋಮವಾರ, ಜೂನ್ 1, 2026

ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯಲ್ಲಿ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ - 2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳಬಹುದಾಗಿದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಜೂನ್ 15 ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ