ಭಾನುವಾರ, ಜೂನ್ 21, 2026
ಬಳ್ಳಾರಿಯಲ್ಲಿ ಯೋಗದ ಜೊತೆ ಮತದಾನದ ಪಾಠ | ಯೋಗಾಭ್ಯಾಸದಲ್ಲಿ ಮೂಡಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಜಾಗೃತಿ
ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ):
ಆರೋಗ್ಯಕ್ಕಾಗಿ ಯೋಗ ಎಷ್ಟು ಮುಖ್ಯವೋ, ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನವೂ ಅಷ್ಟೇ ಮುಖ್ಯ ಎಂಬ ಸಂದೇಶದೊAದಿಗೆ ಹಮ್ಮಿಕೊಳ್ಳಲಾಗಿದ್ದ ವಿಶಿಷ್ಟ ಯೋಗಾಭ್ಯಾಸ ಕಾರ್ಯಕ್ರಮ ಬಳ್ಳಾರಿಯಲ್ಲಿ ಸಾರ್ವಜನಿಕರ ಗಮನ ಸೆಳೆದಿದೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಜಂಟಿ ಆಶ್ರಯದಲ್ಲಿ, ಸಾರ್ವಜನಿಕರಲ್ಲಿ “ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ” ಕುರಿತು ಜಾಗೃತಿ ಮೂಡಿಸಲು ಭಾನುವಾರ ನಗರದ ಎಸ್.ಜಿ ಕಾಲೇಜು ಆವರಣದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ವಿನೂತನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
*ಯೋಗಾಸನದ ಮೂಲಕ ಎಸ್‌ಐಆರ್ ಜಾಗೃತಿ ಸಂದೇಶ:*
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಯೋಗ ವಿಭಾಗದ ಉಪನ್ಯಾಸಕ ಮಹೇಶ್ ಬಾಬು ಅವರ ನೇತೃತ್ವದ ಯೋಗಪಟುಗಳ ತಂಡ ‘ಎಸ್‌ಐಆರ್’ ಅಕ್ಷರ ಹೋಲುವ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ, “ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ” ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕು ಮತ್ತು ತಪ್ಪುಗಳನ್ನು ತಿದ್ದಿಕೊಳ್ಳಬೇಕು ಎಂಬ ಜಾಗೃತಿಯನ್ನು ಮೂಡಿಸಲಾಯಿತು.
ಬೆಳಗಿನ ಜಾವ ನಡೆದ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನೂರಾರು ಯೋಗಾಸಕ್ತರು, ಅಧಿಕಾರಿಗಳು, ಯುವಕರು ಹಾಗೂ ನಾಗರಿಕರು ಪಾಲ್ಗೊಂಡು ‘ಎಸ್‌ಐಆರ್’ ಅಕ್ಷರ ಹೋಲುವ ಯೋಗದ ವಿವಿಧ ಭಂಗಿ ಮಾಡುವ ಮೂಲಕ ಗಮಸೆಳೆಯಲಾಯಿತು.
ಆರೋಗ್ಯವಂತ ದೇಹಕ್ಕೆ ಯೋಗ ಹೇಗೆ ಅಗತ್ಯವೋ, ಸದೃಢ ಪ್ರಜಾಪ್ರಭುತ್ವಕ್ಕೆ ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅಷ್ಟೇ ಮುಖ್ಯ. ಹಾಗಾಗಿ 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂಬುದನ್ನು ಅರಿವು ಮೂಡಿಸಲಾಯಿತು.
ಯೋಗದಂತಹ ಸಕಾರಾತ್ಮಕ ವೇದಿಕೆಯನ್ನು ಬಳಸಿಕೊಂಡು ಚುನಾವಣಾ ಸಾಕ್ಷರತೆ ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದ್ದು, ಸಾರ್ವಜನಿಕರು ಮತ್ತು ಯುವಜನತೆ ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಅಥವಾ ಮೃತರ ಹೆಸರನ್ನು ತೆಗೆದುಹಾಕುವ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುತ್ತವೆಯಾದರೂ, ಈ ಬಾರಿ ಸಂಪೂರ್ಣವಾಗಿ ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಈ ವಿಶೇಷ ತೀವ್ರ ಪರಿಷ್ಕರಣೆಯನ್ನು ನಡೆಸಲಾಗುತ್ತಿದೆ. ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ನವೀಕರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಬಿಎಲ್‌ಒಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದು ಎಂದು ಹೇಳಿದರು.
ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಮಾತನಾಡಿ, ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪೂರ್ಣ ಪ್ರಮಾಣದಲ್ಲಿ ಸ್ಪಂದಿಸಿ, ಹೊಸ ಹಾಗೂ ದೋಷಮುಕ್ತ ಮತದಾರರ ಪಟ್ಟಿ ತಯಾರಿಕೆಗೆ ಕೈಜೋಡಿಸಬೇಕು ಎಂದು ಹೇಳಿದರು.
ಇದೇ ವೇಳೆ “ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ” ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೇಂಧರ್ ಸೇರಿದಂತೆ ಇತರೆ ಅಧಿಕಾರಿ- ಸಿಬ್ಬಂದಿ, ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)






ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ