ಶುಕ್ರವಾರ, ಜೂನ್ 19, 2026
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ‘ಅರಿವು’ ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (ನಿ) ಬಳ್ಳಾರಿ ಜಿಲ್ಲಾ ಕಚೇರಿಯ ವತಿಯಿಂದ 2026-27ನೇ ಸಾಲಿನ ಕ್ರಿಯಾ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಂದ ‘ಅರಿವು’ ವಿದ್ಯಾಭ್ಯಾಸ ಸಾಲ ಯೋಜನೆಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ, ನೀಟ್ ಅಥವಾ ಜೆಇಇ ಮೂಲಕ ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‌ಮೆಂಟ್ ಕೋಟಾದಡಿ ಆಯ್ಕೆಯಾಗಿ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಗರಿಷ್ಠ ರೂ.5 ಲಕ್ಷದವರೆಗೆ ವಿದ್ಯಾಭ್ಯಾಸ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
*ಅರ್ಜಿ ಸಲ್ಲಿಸಬಹುದಾದ ವೃತ್ತಿಪರ ಕೋರ್ಸ್ಗಳು:*
ಎಂಬಿಬಿಎಸ್, ಎಂಡಿ, ಬಿಡಿಎಸ್, ಎಂಡಿಎಸ್, ಬಿ.ಆಯುಷ್, ಎಂ.ಆಯುಷ್, ಬಿಇ, ಬಿ.ಟೆಕ್, ಎಂ.ಟೆಕ್, ಎಂಇ, ಬಿ.ಆರ್ಚ್, ಎಂ.ಆರ್ಚ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ತೋಟಗಾರಿಕೆ, ಕೃಷಿ ಎಂಜಿನಿಯರಿAಗ್, ಡೈರಿ ತಂತ್ರಜ್ಞಾನ, ಅರಣ್ಯ, ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ, ಆಹಾರ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಮೀನುಗಾರಿಕೆ, ರೇಷ್ಮೆ ಕೃಷಿ, ಗೃಹ/ಸಮುದಾಯ ವಿಜ್ಞಾನಗಳಲ್ಲಿ ಬಿಎಸ್‌ಸಿ ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ ಮತ್ತು ಡಿ.ಫಾರ್ಮಾ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ https://kccdconline.karnataka.gov.in/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ), 1ನೇ ಮಹಡಿ, ಮೌಲಾನಾ ಆಜಾದ್ ಭವನ, ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ, ಬಳ್ಳಾರಿ – 583101 ಅಥವಾ ದೂ.08392-294370 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ