ಗುರುವಾರ, ಜೂನ್ 18, 2026

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಹಿರೆಕೆರೆಯಾಗಿನಹಳ್ಳಿ ಗ್ರಾಮದ ಮಹೇಶ್.ಹೆಚ್ ಎನ್ನುವ 34 ವರ್ಷದ ವ್ಯಕ್ತಿಯು 2021 ರ ಜೂ.10 ರಂದು ಧಾರವಾಡಕ್ಕೆ ಹೋಗುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ದೂ.08395-260100, ಅಥವಾ ಬಳ್ಳಾರಿ ಎಸ್.ಪಿ. ಕಚೇರಿ ದೂ.08392-258400 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ