ಬುಧವಾರ, ಜೂನ್ 10, 2026

ಕುರುಗೋಡು ಪುರಸಭೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯನ್ನು ‘ಸರ್ವರಿಗೂ ಸೂರು’ ಅಭಿಯಾನದಡಿ ಮುಂದಿನ 5 ವರ್ಷಗಳಲ್ಲಿ ನಗರದ ಕುಟುಂಬಗಳಿಗೆ ಸಹಾಯಧನ ಮೂಲಕ ಸೂರು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯಡಿ ಕೊಳಚೆ ನಿವಾಸಿಗಳನ್ನು ಒಳಗೊಂಡAತೆ ನಗರ ಪ್ರದೇಶದ ವಸತಿ ರಹಿತ ಹಾಗೂ ನಿವೇಶನ ರಹಿತ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಕೇAದ್ರ ಸರ್ಕಾರದ ಆನ್‌ಲೈನ್ ಪೋರ್ಟಲ್ ನಲ್ಲಿ ಫಲಾಭವಿಗಳ ವಿವರಗಳನ್ನು ನಮೂದಿಸಲು ಜೂನ್ 30 ರವರೆಗೆ ಅವಕಾಶ ಕಲ್ಪಿಸಿದ್ದು, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ