ಮಂಗಳವಾರ, ಜೂನ್ 2, 2026

ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷ ಪ್ರವೇಶಾತಿಗೆ ಆಫ್ ಲೈನ್ ಅರ್ಜಿ ಆಹ್ವಾನ

ಬಳ್ಳಾರಿ,ಜೂ.02(ಕರ್ನಾಟಕ ವಾರ್ತೆ): ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿಗೆ ಡಿಪ್ಲೋಮಾ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಪಾಲಿಟೆಕ್ನಿಕ್ ಕಾಲೇಜ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 6 ಸಂಜೆ 05 ಗಂಟೆಯೊಳಗೆ ಸಲ್ಲಿಸಬಹುದು. ಜೂನ್ 8 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಿದ್ದು, ಜೂನ್ 9 ರ ಸಂಜೆ 04 ರ ವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಜೂನ್ 10 ರಂದು ಸಂಜೆ 05 ಗಂಟೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 11 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-294371 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ