ಗುರುವಾರ, ಜೂನ್ 4, 2026
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.04(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗೆ ಬಳ್ಳಾರಿ ಪಶ್ಚಿಮ ವಲಯದ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಹಾಗೂ ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿಎಸ್ಸಿ ಬಿ.ಇಡಿ ಪದವಿ ಪಡೆದ ಅಭ್ಯರ್ಥಿಗಳು ಜೂ.08 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಮುಖ್ಯೋಪಾಧ್ಯಾಯರ ಕಚೇರಿಗೆ ಸಲ್ಲಿಸಬೇಕು.
ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಅನುಭವಕ್ಕೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.9964645285, 9740680501 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ