ಶನಿವಾರ, ಜೂನ್ 6, 2026

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.06(ಕರ್ನಾಟಕ ವಾರ್ತೆ): ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿ.ಯು.ಸಿ., ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ವಿವರಗಳಿಗಾಗಿ ಹಾಗೂ ಯಾವುದೇ ಗೊಂದಲಗಳಿದ್ದಲ್ಲಿ ಕೆಳಗಿನ ತಾಲೂಕು ಮಾಹಿತಿ ಕೇಂದ್ರಗಳನ್ನು ಅಥವಾ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ, ಬಳ್ಳಾರಿ. ಮೊ.8310321101. ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು. ಮೊ.9036925966 / 8660575061. ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ. ಮೊ.9148889975 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ