ಶುಕ್ರವಾರ, ಜೂನ್ 12, 2026
ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ದ್ವಿತೀಯ ವರ್ಷದ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಐ.ಟಿ.ಐ ಮತ್ತು ದ್ವಿತೀಯ ಪಿ.ಯು.ಸಿ(ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಗಳನ್ನು ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಕಚೇರಿಗೆ ಜೂನ್ 20 ರೊಳಗೆ ಸಲ್ಲಿಸಬಹುದು.
ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್: ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟಾçನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟಿçಕಲ್ ಅಂಡ್ ಎಲೆಕ್ಟಾçನಿಕ್ಸ್, ಮೆಕ್ಯಾನಿಕಲ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿAಗ್ ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.
ಜೂನ್ 23 ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಜೂ.25 ರ ವರೆಗೆ ತಿದ್ದುಪಡಿಗೆ ಅವಕಾಶ, ಜೂ.30 ರಂದು ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜುಲೈ 01 ರಿಂದ 04 ರೊಳಗೆ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-294371 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ