ಶುಕ್ರವಾರ, ಜೂನ್ 19, 2026

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ): ತಾಲ್ಲೂಕಿನ ಅಸುಂಡಿ ಗ್ರಾಮದ ಆಶ್ರಯ ಕಾಲೋನಿ ನಿವಾಸಿಯಾದ ಮಸ್ತಾನ್ ವಲಿ ಎನ್ನುವ 19 ವರ್ಷದ ಯುವಕ ಜೂ.10 ರಂದು ಬಳ್ಳಾರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪಿ.ಡಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 5 ಅಡಿ ಎತ್ತರ, ಕೋಲು ಮುಖ, ಕೆಂಪು ಮೈಬಣ್ಣ, ತೆಳ್ಳನೆಯ ಮೈ ಕಟ್ಟು ಹೊಂದಿದ್ದು, ಕಾಣೆಯಾದ ಸಂರ್ಧಭದಲ್ಲಿ ಲೈಟ್ ಕಲರ್ ಟೀ-ಶರ್ಟ್ ಹಾಗೂ ನೀಲಿ ಜೀನ್ಸ್ ಬರ್ಮೋಡ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆಗಳನ್ನು ಮಾತನಾಡುತ್ತಾನೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಿ.ಡಿ. ಹಳ್ಳಿ ಪೊಲೀಸ್ ಠಾಣೆ ದೂ.08392- 265010, ಸಿಪಿಐ ದೂ.08392-276461, ಬಳ್ಳಾರಿ ಎಸ್.ಪಿ. ಕಚೇರಿ ದೂ.08392258400 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392258100 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ