ಶುಕ್ರವಾರ, ಜೂನ್ 5, 2026

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.05(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಯೋಜನೆಯಡಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಣಿ ಕಾರ್ಮಿಕರ, ಬೀಡಿ ತಯಾರಿಕೆ ಮತ್ತು ಚಲನಚಿತ್ರ ಕ್ಷೇತ್ರದ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್‌ಬಜಾರ್‌ನ ಬಂಡಿಹಟ್ಟಿ ರಸ್ತೆಯ ಬೆಳಗಲ್ ಕ್ರಾಸ್ ಬಳಿಯ ಎಕ್ಸ್-ಸರ್ವೀಸ್ ಕಾಲೋನಿಯ ನಂ.171 ಐಒಎಂಸಿ ಎಸ್‌ಸಿಎಂ ಕಚೇರಿಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಕಲ್ಯಾಣ ಸಂಸ್ಥೆಯ ವೈದ್ಯಕೀಯ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ