ಶುಕ್ರವಾರ, ಜೂನ್ 12, 2026
ಬಳ್ಳಾರಿ: ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ಮ್ಯಾನ್ಯುಯಲ್ ಸ್ಕಾö್ಯವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರ ಸೆಕ್ಷನ್ 24 ರನ್ವಯ ಬಳ್ಳಾರಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ' ರಚಿಸಲಾಗುತ್ತಿದೆ. ಈ ಸಮಿತಿಗೆ ನಾಮನಿರ್ದೇಶನ ಮಾಡಲು ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮ್ಯಾನ್ಯುಯಲ್ ಸ್ಕಾö್ಯವೆಂಜರ್‌ಗಳ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಸಮಾಜ ಸೇವಕರು ಮತ್ತು ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಸಮುದಾಯವನ್ನು ಪ್ರತಿನಿಧಿಸುವ ಅಥವಾ ಆ ಸಂಘಟನೆಗಳಿಗೆ ಸೇರಿದ ಆಸಕ್ತಿಯುಳ್ಳ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಮಿತಿಗೆ ಒಟ್ಟು 04 ಸದಸ್ಯರನ್ನು (02 ಪುರುಷರು ಮತ್ತು 02 ಮಹಿಳೆಯರು) ನಾಮನಿರ್ದೇಶನ ಮಾಡಲಾಗುತ್ತದೆ.
*ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:*
ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ ಬಗ್ಗೆ ದಾಖಲಾತಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ (2).
ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಕೆಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೋಟೆ ಪ್ರದೇಶ, ಬಳ್ಳಾರಿ ಅಥವಾ ಮೊ.9480843023, ದೂ.08392-267932 ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ