ಗುರುವಾರ, ಜೂನ್ 18, 2026

ಪೂರ್ವಭಾವಿ ಸಭೆಯಲ್ಲಿ ನಿರ್ಧಾರ | ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದರು. ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ ಮತ್ತು ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾಯಿತು. ಇಬ್ಬರೂ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಮಹನೀಯರ ಸಾಧನೆ ಮತ್ತು ಕಾರ್ಯಗಳ ಬಗ್ಗೆ ಬಿತ್ತರಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಸಬೇಕು. ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ