ಶುಕ್ರವಾರ, ಜೂನ್ 12, 2026
ತುರ್ತು ಪರಿಸ್ಥಿತಿಯಲ್ಲಿ ಜನರ ಪ್ರಾಣ ಉಳಿಸುವ ರೆಡ್‌ಕ್ರಾಸ್ ಸೇವೆ ಶ್ಲಾಘನೀಯ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣವನ್ನು ರಕ್ಷಿಸುವ ಮೂಲಕ ರೆಡ್‌ಕ್ರಾಸ್ ಸಂಸ್ಥೆಯ ಸಿಬ್ಬಂದಿ ಮಾಡುತ್ತಿರುವ ಮಾನವೀಯ ಸೇವೆ ಅತ್ಯಂತ ಸಂತೋಷ ತರುವಂತಹದ್ದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಶ್ಲಾಘಿಸಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಬಳ್ಳಾರಿ ಶಾಖೆ ಹಾಗೂ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಹಳೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶ್ವ ರೆಡ್‌ಕ್ರಾಸ್ ದಿನಾಚಾರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ರೆಡ್‌ಕ್ರಾಸ್ ಸಂಸ್ಥೆಯ ಉದಾತ್ತ ಧ್ಯೇಯೋದ್ದೇಶಗಳು ಮತ್ತು ಸಮಾಜಮುಖಿ ಕಾರ್ಯಗಳು ಅನನ್ಯವಾಗಿವೆ ಎಂದರು.
ರೆಡ್‌ಕ್ರಾಸ್ ಸಂಸ್ಥೆಯ ಈ.ಸಿ ಸದಸ್ಯ ಡಾ.ನಾಗರಾಜ್‌ರಾವ್ ಅವರು ಮಾತನಾಡಿ, ದಿನನಿತ್ಯದ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ ಎದುರಿಸುವ ಮಾನಸಿಕ ಒತ್ತಡವನ್ನು ನಿವಾರಿಸಲು ಯೋಗ, ಪ್ರಾಣಾಯಾಮ ಮತ್ತು ಉತ್ತಮ ಜೀವನಶೈಲಿಯ ಅಭ್ಯಾಸಗಳು ಅತ್ಯಂತ ಪರಿಣಾಮಕಾರಿ ಎಂದು ಅವರು ಸವಿಸ್ತಾರವಾಗಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೆಡ್‌ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರಿಗೆ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಅವರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ಪೊಲಾ ರಾಧಾಕೃಷ್ಣ, ಈ.ಸಿ. ಸದಸ್ಯ ಪ್ರೊ. ಕುಪ್ಪಗಲ್ಲು ವೀರೇಶ್ ಹಾಗೂ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆಯ ಅಜೀವ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ