ಶನಿವಾರ, ಜೂನ್ 20, 2026

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ತಾಲ್ಲೂಕಿನ ಅಲ್ಲಿಪುರ ಗ್ರಾಮದ ನಿವಾಸಿಯಾದ ರವಿಕುಮಾರ ಎಂಬ 30 ವರ್ಷದ ವ್ಯಕ್ತಿ ಜೂ.18 ರಂದು ಲೇಬರ್ ಕಾರ್ಡ್ ಮಾಡಿಸಿ ಮೆಸ್ತಿç ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 5.4 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ, ಧೃಡವಾದ ಮೈ ಕಟು,್ಟ ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂರ್ಧಭದಲ್ಲಿ ಪಿಂಕ್ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392276461, 9480803049, ಬಳ್ಳಾರಿ ಎಸ್.ಪಿ ಕಚೇರಿ ದೂ.08392-258400 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ