ಸೋಮವಾರ, ಜೂನ್ 15, 2026

ಮಹಿಳೆ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ): ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಸಿದ್ದಾಪುರ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಸಿದ್ದಮ್ಮ ಎನ್ನುವ 30 ವರ್ಷದ ಮಹಿಳೆ 2024 ರ ಮೇ 23 ರಂದು ಬೆಳಗಿನ ಜಾವ 4 ಗಂಟೆಗೆ ಮನೆಯಿಂದ ಬಹಿರ್ದೆಸೆಗೆ ಹೊರಹೋಗಿ ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ ಕಾಣೆಯಾದ ಮಹಿಳೆಯ ಚಹರೆ: ಎತ್ತರ 5.4 ಅಡಿ, ತೆಳುವಾದ ಮೈಕಟ್ಟು, ಗೋದಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಹಸಿರು ಬಣ್ಣದ ಸೀರೆ ಮತ್ತು ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ