ಶನಿವಾರ, ಜೂನ್ 20, 2026

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ತಾಲ್ಲೂಕಿನ ಶಿಡಿಗಿನಮೊಳ ಗ್ರಾಮದ ಮಾರಮ್ಮ ಗುಡಿ ಹತ್ತಿರದ ನಿವಾಸಿಯಾದ ವೀರಾಂಜನೇಯ ಎನ್ನುವ 23 ವರ್ಷದ ಯುವಕ ಏ.21 ರಂದು ಬೆಂಗಳೂರಿಗೆ ಹೋಗಿ ಕೆಲಸ ಮಾಡಿ ಹಣ ತೆಗೆದುಕೊಂಡು ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪಿ.ಡಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 5.4 ಅಡಿ ಎತ್ತರ, ಕೋಲು ಮುಖ, ಎಣ್ಣೆ ಗೆಂಪು ಮೈಬಣ್ಣ, ಸಾಧಾರಣ ಮೈ ಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆಗಳನ್ನು ಮಾತನಾಡುತ್ತಾನೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯ ದೂ.08392- 265010, ಸಿಪಿಐ ದೂ.08392-276461, ಬಳ್ಳಾರಿ ಎಸ್.ಪಿ. ಕಚೇರಿ ದೂ.08392258400 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392258100 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ