ಮಂಗಳವಾರ, ಜೂನ್ 16, 2026

ಮಾಧ್ಯಮ ಅಕಾಡೆಮಿಯಿಂದ ರಾಷ್ಟçಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ

ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “ಫೋಕಸ್ ಆನ್ ನ್ಯೂಸ್” ಎಂಬ ರಾಷ್ಟçಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35 ಸಾವಿರ ರೂ. 25 ಸಾವಿರ ರೂ. ಹಾಗೂ 15 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ 50 ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು. *ಸ್ಪರ್ಧೆಯ ಷರತ್ತುಗಳು:* ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, 01-01-2025 ರಿಂದ 31-5-2026 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಹಾಗೂ ಪ್ರಕಟವಾಗಿರುವ ಯಾವುದಾದರೂ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಈ ಸ್ಪರ್ಧೆಯನ್ನು ಸುದ್ಧಿ ಛಾಯಾಗ್ರಾಹಕರಿಗಾಗಿ ಮಾತ್ರ ಆಯೋಜಿಸಲಾಗಿದೆ. ಪ್ರತಿಯೊಬ್ಬ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿAದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಪಿಐಬಿಯು ಪತ್ರಕರ್ತರಿಗಾಗಿ ನೀಡುವ ಮಾಧ್ಯ ಮಾನ್ಯತೆ ಕಾರ್ಡ್ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು. ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನು ಜೆಪಿಇಜಿ ಫಾರ್ಮಟ್ (ಎPಇಉ ಜಿoಡಿmಚಿಣ) ನಲ್ಲಿ ಮಾತ್ರ ಸಲ್ಲಿಸಬೇಕು. ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು 20''*30'' ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ಕಳಿಸುವ ಇಮೇಜ್ ಗಳು 20''*30'' ಅಳತೆಯ, 300 ಡಿಪಿಐ ನಲ್ಲಿದ್ದು, ಕನಿಷ್ಠ 5 ಎಂಬಿ ಗಾತ್ರದಲ್ಲಿರಬೇಕು. ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು. ಎಐ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ ಸೈಟ್ ನಲ್ಲಿ ಇರುವ ನಿಗದಿತ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‌ಗಳನ್ನು focusonnewskma@gmail.com ಇ-ಮೇಲ್ ವಿಳಾಸಕ್ಕೆ ಜೂನ್ 30 ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು, ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ- ರೂ.35 ಸಾವಿರ, ದ್ವಿತೀಯ ಬಹುಮಾನ- ರೂ.25 ಸಾವಿರ ಹಾಗೂ ತೃತೀಯ ಬಹುಮಾನ- ರೂ.15 ಸಾವಿರ ಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845351766 ಹಾಗೂ 9449245980 ನ್ನು ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ